ಮಳೆ ಅವಾಂತರ ; ಪರಿಸ್ಥಿತಿ ಅವಲೋಕಿಸಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್.

ಬೆಂಗಳೂರು,ಅಕ್ಟೋಬರ್,26,2021(www.justkannada.in): ಕಳೆದ 15 ದಿನಗಳಿಂದ ನಿರಂತರ ಸುರಿದ ಧಾರಾಕಾರ ಮಳೆಯಿಂದ ಬೆಂಗಳೂರು ನಗರದ ಮೂಲಸೌಕರ್ಯ ಹಾಳಾಗಿದ್ದು, ಇದಕ್ಕಾಗಿ ಬಿಬಿಎಂಪಿ, ಸ್ಮಾರ್ಟ್ ಸಿಟಿ, ಮೆಟ್ರೋ, ಬೆಸ್ಕಾಂ ಮತ್ತು ಜಲಮಂಡಳಿಗಳ ಮಧ್ಯೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಸೂಚಿಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಮಳೆಯಿಂದ ಹಾನಿಗೊಳಗಾದ ಹಲವಾರು ಪ್ರದೇಶಗಳ ರಸ್ತೆ ಮತ್ತಿತರ ಮೂಲಸೌಕರ್ಯವನ್ನು ಪರಿವೀಕ್ಷಣೆ ನಡೆಸಿದರು.

ಪರಿವೀಕ್ಷಣೆ ಸಂದರ್ಭದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ ಗುಪ್ತಾ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯ ಇಂಜಿನಿಯರ್ ಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Key words: Heavy rain-CS- Ravikumar – reviewed -situation