ಯಾರು ಬೆಂಬಲ ಕೊಡಲಿ ಬಿಡಲಿ ನಾಳೆ ಬಂದ್ ಮಾಡೇ ಮಾಡುತ್ತೇವೆ- ವಾಟಾಳ್ ನಾಗರಾಜ್.

ಬೆಂಗಳೂರು,ಡಿಸೆಂಬರ್,30,2021(www.justkannada.in):  ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು ಈ ನಡುವೆ ಬಂದ್ ಯಾರು ಬೆಂಬಲ ಕೊಡಲಿ ಬಿಡಲಿ ಬಂದ್ ಮಾಡೇ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ನಾಳಿನ ಕರ್ನಾಟಕ ಬಂದ್ ಗೆ ಬೆಂಬಲಿಸುವಂತೆ  ಆಗ್ರಹಿಸಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ತೆರೆದ ಜೀಪ್ ನಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಧರಣಿ ನಡೆಸಿದರು. ಈ ವೇಳೆ ಅಂಗಡಿ ಮಾಲೀಕರಿಗೆ ಅಂಗಡಿಗಳನ್ನ ಮುಚ್ಚುವಂತೆ ಮನವಿ ಮಾಡಿದರು.

ಎಂಇಎಸ್ ವಿರುದ್ಧ ಕ್ರಮಕ್ಕೆ  ಒತ್ತಾಯಿಸಿ ಬೆಂಗಳೂರಿನ ಟೌನ್ ಹಾಲ್ ಎದುರು ಕರವೇ ಅದ್ಯಕ್ಷ ನಾರಾಯಣಗೌಡ ನನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದು  ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ. ನೂರಾರು ಸಂಖ್ಯೆಯಲ್ಲಿ  ಕರವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Key words:  support –tomorrow-bandh- Vatal Nagaraj.