ರಾಜ್ಯದಲ್ಲಿ ಕೋವಿಡ್ 3ನೇ ಅಲೆ ತಡೆಗೆ ಕಠಿಣ ಕ್ರಮದ ಸುಳಿವು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜನವರಿ,3,2022(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಎಂದು ಬಿಂಬಿತವಾಗಿದೆ. 3ನೇ ಅಲೆ ತಡೆಗೆ ಕಠಿಣಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರ ಗಂಭೀರ ಯೋಜನೆಗಳನ್ನ ರೂಪಿಸುತ್ತದೆ. ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸಬೇಕು. ಆರೋಗ್ಯ ಸುರಕ್ಷತೆಗಳ ಬಗ್ಗೆ ಎಲ್ಲಾ ಕ್ರಮ ಕೈಗೊಳ್ಳಬೇಕು. ಗಡಿಗಳಲ್ಲಿ ಭದ್ರತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ವೇಗವಾಗಿ ಹರಡುತ್ತಿರುವ ಸೋಂಕು ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂಬ ಬಗ್ಗೆ ತಜ್ಞರ ಜೊತೆ ಚರ್ಚೆ ನಡೆಸುವ ಅಗತ್ಯವಿದೆ. ಹೀಗಾಗಿ ನಾಳೆ ಸಂಜೆ ತಜ್ಞರ ಜೊತೆ ಚರ್ಚೆ ನಡೆಸಲಾಗುವುದು ಎಂದು  ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: CM-Basavaraja Bommai-hinted – tough action – covid -3rd wave