ರಾಜ್ಯ ಬಜೆಟ್ ಮಂಡನೆ ಆರಂಭ: ಕಾಂಗ್ರೆಸ್ ಸದಸ್ಯರಿಂದ ಸಭಾತ್ಯಾಗ…

ಬೆಂಗಳೂರು,ಮಾರ್ಚ್,8,2021(www.justkannada.in): 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು ಸಿಎಂ ಬಿಎಸ್ ಯಡಿಯೂರಪ್ಪ 8ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಮಧ್ಯೆ  ಬಜೆಟ್ ಮಂಡನೆಗೆ ಕಾಂಗ್ರೆಸ್ ವಿರೋಧವ್ಯಕ್ತಪಡಿಸಿದ್ದು . ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಭಾತ್ಯಾಗ ಮಾಡಿದೆ.

ಸರ್ಕಾರಕ್ಕೆ ಬಜೆಟ್ ಮಂಡಿಸಲು ನೈತಿಕತೆ ಇಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿ ಧರಿಸಿ ಸದನಕ್ಕೆ ಹಾಜರಾದರು. ನಂತರ ಸಿಎಂ ಬಿಎಸ್ ಯಡಿಯೂರಪ್ಪ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡಿದರು.

Key words: Start – State Budget-Walk out – Congress­ Members