ಸಚಿವ ಉಮೇಶ್ ಕತ್ತಿ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಬಿಎಸ್ ವೈ…

ಬೆಂಗಳೂರು,ಏಪ್ರಿಲ್,28,2021(www.justkannada.in): ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದು ಒಳ್ಳೆಯದು ಎಂದು ಹೇಳಿದ್ದ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.jk

ಈ ಕುರಿತು ವಿಷಾದ ವ್ಯಕ್ತಪಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಉಮೇಶ್ ಕತ್ತಿ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ.  ಜನರು ಸಮಸ್ಯೆ ಹೇಳಿಕೊಂಡರೆ ಅದಕ್ಕೆ ಸ್ಪಂದಿಸಬೇಕು. ಆ ವ್ಯಕ್ತಿಗೆ ಸಾಯಿ ಅಂತಾ ಹೇಳಿದ್ದು ಸರಿಯಲ್ಲ. ಒಬ್ಬ ಸಚಿವರಾಗಿ ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು. CM BS Yeddyurappa- regretted - statement - Minister Umesh katti

ಸಚಿವರಿಗೆ ಕರೆ ಮಾಡಿ, 5 ಕೆಜಿ ಅಕ್ಕಿ ಬದಲು 3ಕೆಜಿ ಅಕ್ಕಿ ಕೊಡುತ್ತಿರುವ ಬಗ್ಗೆ ಆ ವ್ಯಕ್ತಿ ಪ್ರಶ್ನಿಸಿದ್ದಾರೆ. ಬದುಕಬೇಕಾ..? ಸಾಯಬೇಕಾ…? ಎಂದಿದ್ದಾರೆ. ಈ ವೇಳೆ ಸಚಿವ ಉಮೇಶ್ ಕತ್ತಿ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ. ಉತ್ತರ ಕರ್ನಾಟಕ ಭಾಗದವರಿಗೆ ಗೋಧಿ ಬೇಡವಾದರೆ 5 ಕೆಜಿ ಅಕ್ಕಿಯನ್ನೇ ವಿತರಿಸಲು ವ್ಯವಸ್ಥೆ ಮಾಡುತ್ತೇವೆ  ಎಂದು ಸಿಎಂ ಬಿಎಸ್ ವೈ ನುಡಿದರು.

Key words: CM BS Yeddyurappa- regretted – statement – Minister Umesh katti