Sunday, August 23, 2026

BDA Apartments

Home Front Page ಸುವರ್ಣ ಸೌಧದ ಬಳಿ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿಗೆ ತಡೆ: ಪೊಲೀಸರ ಜತೆ ವಾಗ್ವಾದ.

ಸುವರ್ಣ ಸೌಧದ ಬಳಿ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿಗೆ ತಡೆ: ಪೊಲೀಸರ ಜತೆ ವಾಗ್ವಾದ.

ಬೆಳಗಾವಿ,ಡಿಸೆಂಬರ್,16,2021(www.justkannada.in):  ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಕಾಂಗ್ರೆಸ್ ಇಂದು ಬೆಳಗಾವಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ  ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೆ ಪ್ರತಿಭಟನಾರ್ಯಾಲಿ ನಡೆಯಿತು. ರ್ಯಾಲಿಯಲ್ಲಿ ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕಾಂಗ್ರಸ್ ಪ್ರತಿಭಟನಾ ರ್ಯಾಲಿಗೆ ಸುವರ್ಣಸೌಧದ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಆದರೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ಒಳ್ಳ ನುಗ್ಗಲು ಯತ್ನಿಸಿದರು. ಈ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದು ಬಾರಿ ಹೈಡ್ರಾಮಾ ನಡೆಯಿತು.

Key words: protests -Congress -rally –suvarna soudha – Police