ಸೆ.13ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ: ಯಾರೂ ಗೈರಾಗದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ.

ಬೆಂಗಳೂರು,ಸೆಪ್ಟಂಬರ್,8,2021(www.justkannada.in):  ಸೆಪ್ಟೆಂಬರ್ 13 ರಿಂದ  ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಸದನಕ್ಕೆ ಯಾರೂ ಗೈರಾಗದಂತೆ ಶಾಸಕರು, ಸಚಿವರಿಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಸರ್ಕಾರದಿಂದ ನಮಗೆ 18 ಬಿಲ್‌ಗಳು ಬಂದಿವೆ. ಮೊದಲೇ‌ ಬಿಲ್ ಬರಬೇಕೆಂದು ಸರ್ಕಾರಕ್ಕೆ ತಿಳಿಸಿದ್ದೆ. ಅಧಿವೇಶನದ ವೇಳೆ ರಜೆ ಕೇಳದಂತೆ ತಿಳಿಸಲಾಗಿದೆ.  ಮುಖ್ಯಮಂತ್ರಿ ಹಾಗೂ ಎಲ್ಲಾ ಸಚಿವರ ಗಮನಕ್ಕೆ ಈ ವಿಷಯ ತರಲಾಗಿದೆ ಎಂದರು.

ಸೆ.24ರಂದು ವಿಶೇಷ ಜಂಟಿ ಅಧಿವೇಶನ ಕರೆಯಲಾಗುತ್ತದೆ. ಅಲ್ಲಿ ಸಂಸದೀಯ ಮೌಲ್ಯಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಅಲ್ಲದೇ ವಿಶೇಷ ಜಂಟಿ ಅಧಿವೇಶನಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನೂ ಆಹ್ವಾನಿಸುತ್ತೇವೆ. ಈ ಸಂಬಂಧ ಸಿಎಂ ಮತ್ತು ವಿಧಾನ ಪರಿಷತ್ ಸಭಾಪತಿ ಜತೆ ಚರ್ಚೆ ಮಾಡಿದ್ದೇನೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

Key words: Session -Sept.13-  Speaker -Vishweshwara Hegde Kaggeri.