ಬೆಂಗಳೂರು,ಜುಲೈ,20-7-2026 (www.justkannada.in): ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು ಇಂದು ಹುಟ್ಟೂರು ಹರದನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ನಡುವೆ ಜೈಲಿನಲ್ಲಿರುವ ಇವರ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತನ್ನ ಅಜ್ಜಿಯ ಅಂತ್ಯಕ್ರಿಯೆ ವೀಕ್ಷಿಸಲು ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತನ್ನ ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರಜ್ವಲ್ ರೇವಣ್ಣ ಯಾವುದೇ ಪೆರೋಲ್ ಕೋರಿ ಅರ್ಜಿ ಸಲ್ಲಿಸಿಲ್ಲ. ಪ್ರಸ್ತುತ ಇರುವ ಪರಪ್ಪನ ಅಗ್ರಹಾರ ಜೈಲಿನಿಂದಲೇ ವೀಡಿಯೊ ಕಾನ್ಫರೆನ್ಸ್ ಮೂಲಕ ಅಂತ್ಯಸಂಸ್ಕಾರದ ವಿಧಿ ವಿಧಾನಗಳನ್ನು ವೀಕ್ಷಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಅಂಶುಕುಮಾರ್, “ಪ್ರಜ್ವಲ್ ರೇವಣ್ಣ ಇದುವರೆಗೆ ಪೆರೋಲ್ ಅಥವಾ ತಾತ್ಕಾಲಿಕ ಜಾಮೀನಿಗಾಗಿ ಯಾವುದೇ ಮನವಿ ಮಾಡಿಲ್ಲ. ಅವರಿಗೆ ಅಂತ್ಯಕ್ರಿಯೆಯ ಸ್ಥಳಕ್ಕೆ ತೆರಳಲು ಅವಕಾಶವಿಲ್ಲದ ಕಾರಣ, ಮಾನವೀಯತೆಯ ಆಧಾರದ ಮೇಲೆ ತಮ್ಮ ಸೆಲ್ ನಲ್ಲಿರುವ ಟಿವಿ ಅಥವಾ ಜೈಲು ಆಡಳಿತ ಒದಗಿಸುವ ವೀಡಿಯೊ ಕಾನ್ಫರೆನ್ಸ್ ವ್ಯವಸ್ಥೆಯ ಮೂಲಕ ಅಂತ್ಯಕ್ರಿಯೆಯ ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದಿದ್ದಾರೆ.
Key words: HD Devegowda’s, wife, Chennamma, funeral, Prajwal Revanna







