ಅತಿಕ್ರಮಣ ತೆರವು ಕಾರ್ಯಾಚರಣೆ: ಭೇದಭಾವದ ಪ್ರಶ್ನೆಯೇ ಇಲ್ಲ -ಸಿಎಂ ಬೊಮ್ಮಾಯಿ

ಬೆಂಗಳೂರು, ಸೆಪ್ಟೆಂಬರ್ 12,2022(www.justkannada.in):  ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜಕಾಲುವೆ ಮೇಲೆ ಕಟ್ಟಡ, ಮನೆ  ಕಟ್ಟಿರುವವರು, ಯಾರು ಕಾಲುವೆ ನೀರನ್ನು ಹರಿಸಲು ತೊಂದರೆ ಮಾಡಿದ್ದಾರೆ, ಕೆಲವರು  ರಾಜಕಾಲುವೆಯನ್ನು ಮುಚ್ಚಿದ್ದಾರೆ. ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಪ್ರವಾಹ ಬಂದಾಗ ಐಟಿ ಬಿಟಿಯವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ, ಜನಸಾಮಾನ್ಯರು, ಕೆಳಹಂತದ ಮನೆಗಳಿಗೂ ತೊಂದರೆಯಾಗಿದೆ. ಇವುಗಳನ್ನು ತೆರೆವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಮಾಹಿತಿಯನ್ನು ನೀಡಲಾಗುವುದು. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುವುದು ಎಂದರು.border-districts-state-covid-negative-test-outside-states-minister-basavaraja-bommai

ಪಿ.ಎಸ್.ಐ ಅಕ್ರಮ ನೇಮಕಾತಿ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು ಮಾತನಾಡಿರುವ ವೀಡಿಯೊ  ಬಿಡುಗಡೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆಡಿಯೋನೋ, ವೀಡಿಯೋನೋ ಗೊತ್ತಿಲ್ಲ. ಅದನ್ನು ಪರಿಶೀಲಿಸಲಾಗುವುದು. ಹಾಗೇನಾದರೂ ತಪ್ಪು ಕಂಡುಬಂದಲ್ಲಿ ತನಿಖೆಗೆ ಆದೇಶಿಸಲಾಗುವುದು ಎಂದರು.

Key words: Encroachment -clearance –operation-CM- Bommai

ENGLISH SUMMARY…

Anti-encroachment drive: No question of disparity, CM Bommai clarifies
Bengaluru, Sept.12:
Chief Minister Basavaraj Bommai said there is no question of any disparity in the removal of encroachments.
Talking to reporters in Vidhana Soudha here on Monday, he said eviction notices have been served on those who have built the building or house on Rajakaluve, causing problems in the free flow of water in the kaluve, closed Rajakaluve this affecting the rain water to flow in drain, to clear them.
The CM said the recent floods had affected not only IT/BT companies and workers but also the common people. Houses in low-lying areas too have faced problems. The work on removal of all encroachments will be completed.
Replying to a question, Bommai said the government has sought directions from courts in many cases. The courts will be seriously apprised of the situation. Several directions have been issued by courts in connection with flood related cases in the past. This time, the encroachments will be removed on a big scale, he added.
About the release of a video in which a BJP MLA has spoken about the PSI recruitment scam, the CM said he did not know whether it is an audio or video and it will be examined. Probe will be ordered in case of finding any wrongdoing.