ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ.

ಬೆಂಗಳೂರು,ಅಕ್ಟೋಬರ್,30,2021(www.justkannada.in): ಹೃದಯಾಘಾತದಿಂದ ನಿಧನರಾದ ನಟ ಪವರ್ ಸ್ಟಾ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆಯೇ ನಡೆಯಲಿದೆ.

ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಸಂಜೆ 4 ಗಂಟೆ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಲಿದೆ.

ಈ ಕುರಿತು ಮಾಹಿತಿ ನೀಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಪಾರ್ಥೀವ ಶರೀರದ ಮೆರವಣಿಗೆ ಪ್ರಾರಂಭವಾಗಲಿದ್ದು,  5 ರಿಂದ 5.30ರ ವೇಳೆಗೆ ಕಂಠೀರವ ಸ್ಟುಡಿಯೋಗೆ ಮೆರವಣಿಗೆ ತೆರಳಲಿದೆ.   ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಬರುವವರೆಗೆ ಪೂಜೆ ಮಾಡಲಾಗುತ್ತದೆ. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Key words: Actor- Punith Raj Kumar- funeral- today-bangalore