Thursday, October 8, 2026

BDA Apartments

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆಯೇ ಕರೆಕ್ಟ್: ನಟ ಜಗ್ಗೇಶ್ BDA JK_Adv BDA Adv
Home Front Page ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಬಿಜೆಪಿ ನಾಯಕರ ಟೀಕೆಗಳಿಗೆ ವ್ಯಂಗ್ಯವಾಡಿದ ಡಿಕೆ ಶಿವಕುಮಾರ್.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಬಿಜೆಪಿ ನಾಯಕರ ಟೀಕೆಗಳಿಗೆ ವ್ಯಂಗ್ಯವಾಡಿದ ಡಿಕೆ ಶಿವಕುಮಾರ್.

ಮೈಸೂರು,ಜನವರಿ,3,2022(www.justkannada.in):  ಮೇಕೆದಾಟು ಯೋಜನೆಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆ ಬಗ್ಗೆ ಬಿಜೆಪಿ ನಾಯಕರ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿ ಮಾತನಾಡಿದ ಡಿ.ಕೆ ಶಿವಕುಮಾರ್, ಮಿನಿಸ್ಟರ್ ಗಳು ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ, ರಾಜ್ಯಕ್ಕೂ ಹಿತವಾಗಲಿ. ಅವರು ಈಗ ಗಿಮಿಕ್ ಅಂತಿದ್ದಾರೆ. ವಾಜಪೇಯಿ ಕಾಲದಲ್ಲಿ ಅಡ್ವಾಣಿಯವರು ರಥಯಾತ್ರೆ ಮಾಡಿದ್ರು. ದೇವೆಗೌಡ್ರು ಹಿಂದೆ ಬೇಕಾದಷ್ಟು ಯಾತ್ರೆಗಳನ್ನು ಮಾಡಿದ್ರು ಅದಕ್ಕೆ ಏನಂತ ಹೇಳಬೇಕು? ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿಯವರು ಯಾತ್ರೆ ಮಾಡ್ತಿನಿ ಅಂತಾ ಇದ್ದಾರೆ. ಯಡಿಯೂರಪ್ಪ ಅವರು ಐದು ತಂಡ ಮಾಡಿಕೊಂಡು ಯಾತ್ರೆ ಮಾಡುತ್ತೇನೆ ಅಂತಿದ್ರು.  ಇದಕ್ಕೆಲ್ಲ ಏನ್ ಅಂತ ಹೇಳಬೇಕು. ಎಲೆಕ್ಷನ್ ಟೈಮ್ ನಲ್ಲಿ ಕೊರೋನಾ ಇರಲಿಲ್ಲ. ಇಡೀ ದೇಶದಲ್ಲಿ ಎಲ್ಲು ಕೊರೊನಾ‌ ಇರಲಿಲ್ಲವಾ. ಈಗ ಮಾತನಾಡುತ್ತಿರುವವರಿಗೆ ಒಳ್ಳೆಯದಾಗಲಿ ಎಂದು ಟಾಂಗ್ ನೀಡಿದರು.

ಒಳ್ಳೆಯ ಕಾರ್ಯ ಮಾಡುವ ಮುನ್ನ ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡಿದ್ದೇನೆ. ಎಲ್ಲಾ ಅಡಚಣೆ ಸಂಹಾರ ಮಾಡುವ ಶಕ್ತಿ ದೇವಿಗೆ ಇದೆ. ಹಿಂದಿನಿಂದ ದೇವಿಯ ಶಕ್ತಿಯನ್ನ ನಾವು ನಂಬಿಕೊಂಡಿದ್ದೇವೆ. ಅದಕ್ಕಾಗಿ ನಾವು ಹೋರಾಟಕ್ಕೂ ಮುನ್ನ ದೇವರ ದರ್ಶನ ಮಾಡಿದ್ದೇವೆ. ರಾಜ್ಯದ ಹಿತಕ್ಕಾಗಿ ನಾವು ಈ ಮೇಕೆದಟು ಹೋರಾಟ ಮಾಡುತ್ತಿದ್ದೇವೆ. ಕುಡಿಯುವ ನೀರನ್ನು ಜನರಿಗೆ ಕೊಡಬೇಕು ಅನ್ನೋದು ನಮ್ಮ ಹೋರಾಟ ಎಂದರು.

Key words: DK Shivakumar- caricature -BJP leaders – Congress