ಕೆಪಿಟಿಸಿಎಲ್  ಪರೀಕ್ಷೆ ಅಕ್ರಮ ಪ್ರಕರಣ: ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯ ಬಂಧನ.

ಬೆಳಗಾವಿ,ಸೆಪ್ಟಂಬರ್,9,2022(www.justkannada.in):  ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ  ಸಂಬಂಧಿಸಿದಂತೆ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು  ಬಂಧಿಸಿದ್ದಾರೆ.

ಬೆಂಗಳೂರಿನ ದೇವಸಂದ್ರದ ಮೊಹಮ್ಮದ್ ಅಜೀಮುದ್ದಿನ್ ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 17 ಆರೋಪಿಗಳ ಬಂಧನವಾಗಿದೆ.  ಬಂಧಿತ ಮೊಹಮ್ಮದ್ ಅಜೀಮುದ್ದಿನ್  ಕಿಂಗ್‌ಪಿನ್ ಸಂಜು ಭಂಡಾರಿ ಹಾಗೂ ಬೆಳಗಾವಿಯ ಇತರರಿಗೆ ಆರೋಪಿ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಎನ್ನಲಾಗಿದೆ.

ಕೇಂದ್ರ-ರಾಜ್ಯ ಸರ್ಕಾರಗಳಿಂದ ಈವರೆಗೆ ನಡೆದ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಕೆ ಶಂಕೆ ವ್ಯಕ್ತವಾಗಿದೆ. ಪರೀಕ್ಷೆಗಳಲ್ಲಿ ಅಕ್ರಮ ಎಸಗಲು ಎಲೆಕ್ಟ್ರಾನಿಕ್‌ ಉಪಕರಣಗಳ ಪೂರೈಕೆ ಆರೋಪ ಮಾಡಿದ್ದು, ಬೆಂಗಳೂರಿನ ಎಸ್ಪಿ ರಸ್ತೆಯಲ್ಲಿ ಸ್ಪೈ ಜೋನ್‌ ಎಲೆಕ್ಟ್ರಾನಿಕ್‌ ಮಳಿಗೆಯನ್ನು ಆರೋಪಿ ಹೊಂದಿದ್ದಾನೆ. ಮಳಿಗೆ ಸೀಜ್‌ ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಏಳು N-95 ಮಾಸ್ಕ್, 41 ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಬನಿಯನ್, 445 ಎಲೆಕ್ಟ್ರಾನಿಕ್ ಇಯರ್ ಪೀಸ್, 554 ವಿವಿಧ ಬಗೆಯ ಚಾರ್ಜಿಂಗ್ ಕೇಬಲ್, 6 ವಾಕಿಟಾಕಿ ಜಪ್ತಿ ಮಾಡಲಾಗಿದೆ.

Key words: KPTCL-exam- illegal case- Arrest – accused