Sunday, August 2, 2026

BDA Apartments

Home Front Page ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮ: ಜನ ಆತಂಕ ಪಡುವ ಅಗತ್ಯವಿಲ್ಲ- ಸಿಎಂ ಬೊಮ್ಮಾಯಿ.

ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮ: ಜನ ಆತಂಕ ಪಡುವ ಅಗತ್ಯವಿಲ್ಲ- ಸಿಎಂ ಬೊಮ್ಮಾಯಿ.

ಬೆಳಗಾವಿ,ಡಿಸೆಂಬರ್,22,2022(www.justkannada.in):  ಚೀನಾ ಸೇರಿ ವಿವಿಧ ದೇಶಗಳಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ದೇಶ ಮತ್ತು ರಾಜ್ಯದಲ್ಲೂ ಕೋವಿಡ್ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಬವರಾಜ ಬೊಮ್ಮಾಯಿ, ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಇಂದು ಕೋವಿಡ್ ಕುರಿತು ಚರ್ಚಿಸಲು ಸಭೆ ಕರೆದಿದ್ದೇನೆ. ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ತಜ್ಞರ ಬಳಿಯೂ ಸಲಹೆ ಪಡೆಯುತ್ತೇನೆ. ಕೊರೊನಾ ಬಗ್ಗೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಪಂಚಮಸಾಲಿಗೆ 2ಎ ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಜಯಪ್ರಕಾಶ್ ಹೆಗ್ಡೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ.  ವರದಿ ಪರಿಶೀಲನೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

Key words: covid-19-People – not –worry- CM -Bommai.