ದಲಿತರು ಅನ್ಯ ಧರ್ಮಕ್ಕೆ ಮತಾಂತರವಾದ್ರೆ ಮೀಸಲಾತಿ, ಎಸ್.ಸಿ ಸಮುದಾಯದ ಸೌಲಭ್ಯ ಸಿಗಲ್ಲ- ಸುಪ್ರೀಂಕೋರ್ಟ್

ನವದೆಹಲಿ,ಮಾರ್ಚ್,24,2026 (www.justkannada.in):  ದಲಿತ ಸಮುದಾಯಕ್ಕೆ ಸೇರಿದವರು ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರವಾದರೆ ಮೀಸಲಾತಿ ಮತ್ತು  ಎಸ್.ಸಿ ಸಮುದಾಯಕ್ಕೆ ಸಿಗುವ ಸೌಲಭ್ಯ ಸಿಗಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಪಿ. ಕೆ. ಮಿಶ್ರಾ ಮತ್ತು ಎನ್. ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ತೀರ್ಪನ್ನು ನೀಡಿದ್ದು ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಮತಾಂತರವಾದರೆ ಮೀಸಲಾತಿ ಇಲ್ಲ. ಎಸ್ ಸಿ ಸಮುದಾಯಕ್ಕೆ ಸಿಗುವ ಸೌಲಭ್ಯ ಮತ್ತು ಎಸ್ ಸಿ, ಎಸ್ ಟಿ ಕಾಯ್ದೆ ರಕ್ಷಣೆ ಸಿಗಲ್ಲ ಎಂದು ಸ್ಪಷ್ಟಪಡಿಸಿದೆ.

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು ಪರಿಶಿಷ್ಟ ಜಾತಿಯ (SC-ST) ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅರ್ಹನಲ್ಲ. ಒಬ್ಬ ವ್ಯಕ್ತಿಯು ಕ್ರೈಸ್ತ ಧರ್ಮ ಅಥವಾ ಇತರ ಧರ್ಮಗಳಿಗೆ ಮತಾಂತರಗೊಂಡು ಅದನ್ನು ಅನುಸರಿಸುತ್ತಿದ್ದರೆ, ಅವರು ತಮ್ಮ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಪೀಠ ತಿಳಿಸಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯೊಬ್ಬರು ತಮ್ಮ ಹಳೆಯ ಪರಿಶಿಷ್ಟ ಜಾತಿಯ ಪ್ರಮಾಣಪತ್ರದ ಆಧಾರದ ಮೇಲೆ ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸಿದ ಆರೋಪ ಸಂಬಂಧ  ಪ್ರಕರಣ ದಾಖಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ಈ ತೀರ್ಪು ಪ್ರಕಟಿಸಿದೆ.

Key words: Dalits, convert, not, reservation, Supreme Court