Sunday, September 20, 2026

BDA Apartments

ನನ್ನ ಸ್ಥಾನಮಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ- ರಾಜ್ಯ ಬಿಜೆಪ...
Home Front Page ನನ್ನ ಸ್ಥಾನಮಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ- ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ.

ನನ್ನ ಸ್ಥಾನಮಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ- ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ.

ಶಿವಮೊಗ್ಗ,ಸೆಪ್ಟಂಬರ್,17,2021(www.justkannada.in):  ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ನನ್ನ ಸ್ಥಾನಮಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಸಚಿವ ಸ್ಥಾನ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ನಾನು ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಪರ ಬಿಎಸ್ ಯಡಿಯೂರಪ್ಪ ಲಾಬಿ ಮಾಡಿಲ್ಲ. ಚುನಾವಣೆಯಲ್ಲಿ ನಾನು ಸ್ಪರ್ಧಿಸಬೇಕೋ ಬೇಡವೋ, ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನನ್ನ ಸ್ಥಾನಮಾನದ ಬಗ್ಗೆ ಪಕ್ಷ ನಿರ್ಧರಿಸುತ್ತೆ ಎಂದರು.

Key words: party -high command – decision -BJP vice-president- BY Vijayendra.