ಕಲಬುರಗಿ,ಆಗಸ್ಟ್,4,2023(www.justkannada.in): ಸಚಿವ ಸಂಪುಟವೇ ದೆಹಲಿಗೆ ಹೋಗಿ ಸಭೆ ಮಾಡುವುದು ಸರಿಯಲ್ಲ. ಇದು ರಾಜ್ಯದ ಜನತೆಗೆ ಮಾಡಿದ ಅಪಮಾನ ಎಂದು ಹೇಳಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.![]()
ಸಿಎಂ ಆದವರಿಗೆ ವಿರೋದ ಪಕ್ಷದ ನಾಯಕ ಸ್ಥಾನ ನೀಡುತ್ತಿಲ್ಲ. ಈ ಮೂಲಕ ಪಾಪ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿಯವರು ಅವಮಾನ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.
ಈ ಕುರಿತು ಇಂದು ಮಾತನಾಡಿದ ಪ್ರಿಯಾಂಕ್ ಖರ್ಗೆ, ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಹೀಗಾಗಿ ದೆಹಲಿಗೆ ಹೋಗುವುದು, ಬರುವುದು ಇದ್ದದ್ದೆ. ಮೊದಲು ಅವರ ಮನೆಯಲ್ಲಿ ಆಗುತ್ತಿರುವ ಅವಮಾನದ ಬಗ್ಗೆ ಲೆಕ್ಕ ಹಾಕಲಿ ಎಂದು ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.
Key words: BJP -insulted – Basvaraj Bommai – Minister -Priyank Kharge.







