ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಬೆಂಬಲಕ್ಕೆ ನಿಂತ ಶಾಸಕ ಎಸ್.ಎ ರಾಮದಾಸ್

ಮೈಸೂರು,ಜೂನ್,3,2021(www.justkannada.in):  ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಗಂಭೀರ ಆರೋಪ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್  ತಮ್ಮ ಸ್ಥಾನಕ್ಕೆ ರಾಜೀನಾಮೆ  ನೀಡಿದ್ದಾರೆ.jk

ಈ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಎಸ್.ಎ ರಾಮದಾಸ್, ಮೈಸೂರು ನಗರಪಾಲಿಕಾ ಆಯುಕ್ತರಾದ ಶಿಲ್ಪಾನಾಗ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಎನ್ನುವ ವಿಷಯ ಕೇಳಿ ನಿಜಕ್ಕೂ ಆಶ್ಚರ್ಯ ಹಾಗೂ ಬೇಸರವಾಯಿತು. ಮೈಸೂರಿನಲ್ಲಿ ಕೋವಿಡ್ ಮಿತ್ರ, ಮನೆ ಮನೆ ಸರ್ವೆ ಟೆಲಿ ಮೆಡಿಸಿನ್ ನಂತಹ ಎಲ್ಲಾ ಮಹತ್ತರವಾದ ಕೋವಿಡ್ ಗೆ ಸಂಬಂಧಿಸಿದ ಯೋಜನೆಗಳನ್ನು ತಂದವರು ಇವರು ಎಂದು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

Key words: mysore- corporation-Commissioner – Shilpaanag -resigns -SA Ramdas