ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನವನ್ನೂ ಗೆಲ್ಲುತ್ತೇವೆ- ಕೆ.ಎಸ್ ಈಶ್ವರಪ್ಪ.    

ಶಿವಮೊಗ್ಗ,ಸೆಪ್ಟಂಬರ್,9,2023(www.justkannada.in): ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನವನ್ನೂ ಗೆಲ್ಲುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ಶಿವಮೊಗ್ಗ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಸುವ ಎಲ್ಲರೂ ಒಟ್ಟಾಗಿದ್ದೇವೆ. ಕಾಂಗ್ರೆಸ್ ನಿರ್ನಾಮ ಮಾಡುವ ದೃಷ್ಠಿಯಿಂದ ಒಂದಾಗಿದ್ದೇವೆ ದೇಶವನ್ನ ಉಳಿಸುವ ಸಲುವಗಿ ಮೈತ್ರಿ ಮಾಡಲಾಗುತ್ತದೆ. ಬಿಜೆಪಿ –ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನವನ್ನೂ ಗೆಲ್ಲುತ್ತೇವೆ ಎಂದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 1 ಸ್ಥಾನ ಗೆದ್ದಿತ್ತು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲ್ಲ  ಎಂದು ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು.

Key words: we- will -win 28 seats – BJP-JDS- alliance – KS Eshwarappa