ಮರಳು ಲಾರಿ ಡಿಕ್ಕಿ: ಶಾಲಾ ಬಾಲಕಿ ಸಾವು…

ದಾವಣಗೆರೆ,ಮಾ,9,2020(www.justkannada.in):  ಮರಳು ಲಾರಿ ಡಿಕ್ಕಿಯಾಗಿ ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನ್ಯಾಮತಿ ತಾಲ್ಲೂಕಿನ  ಮರಿಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ದಿವ್ಯಾ ಪಾಟೀಲ್ ಮೃತ ಬಾಲಕಿ. ಮರಳು ಡಿಕ್ಕಿಯಾದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇನ್ನು ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು ಮರಳು ಲಾರಿ ಸಂಚಾರ ನಿರ್ಬಂಧಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸ್ಥಳಕ್ಕೆ ನ್ಯಾಮತಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Key words: Sand truck –collides- death – schoolgirl