Friday, August 21, 2026

BDA Apartments

Home Front Page ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.

ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು,ಆಗಸ್ಟ್,29,2022(www.justkannada.in): ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಹಿನ್ನೆಲೆ ರಾಜ್ಯದ 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಉತ್ತರ ಕನ್ನಡ ,ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ ಚಿಕ್ಕಬಳ್ಳಾಪುರ,  ದಾವಣಗೆರೆ ಕೋಲಾರ, ಚಿಕ್ಕಮಗಳೂರು, ಮಂಡ್ಯ ಸೆರಿ 19 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಮೂರ್ನಾಲ್ಕು ದಿನಗಳಿಂದ  ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳೆಲ್ಲಾ ಕೆರೆಯಂತಾಗಿದ್ದು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.

Key words: rain-karnataka- Meteorological- department