Wednesday, October 7, 2026

BDA Apartments

immense respect BDA JK_Adv BDA Adv
Home Front Page ರಾಜ್ಯದಲ್ಲಿ ಕೃತಕ ಪನ್ನೀರ್  ನಿಷೇಧ- ಸಚಿವ ಯುಟಿ ಖಾದರ್

ರಾಜ್ಯದಲ್ಲಿ ಕೃತಕ ಪನ್ನೀರ್  ನಿಷೇಧ- ಸಚಿವ ಯುಟಿ ಖಾದರ್

ಮಂಗಳೂರು,ಆಗಸ್ಟ್,22,2026 (www.justkannada.in): ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ಸಂಸ್ಥೆಗಳಲ್ಲಿ ಕೃತಕವಾಗಿ ತಯಾರಿಸುವ ‘ಅನಲಾಗ್ ಪನ್ನೀರ್’ ಬಳಕೆಯನ್ನು ಒಂದು ವರ್ಷಗಳ ಕಾಲ ಸಂಪೂರ್ಣವಾಗಿ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಪನ್ನೀರ್ ಪ್ರಿಯರಿಗೆ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದೆ.

ಸಾಮಾನ್ಯವಾಗಿ ಅಸಲಿ ಪನ್ನೀರ್ ಅನ್ನು ಸಂಪೂರ್ಣವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ತಯಾರಿಸಲಾಗುತ್ತದೆ. ಆದರೆ, ವೆಚ್ಚ ಕಡಿಮೆ ಮಾಡಲು ಮತ್ತು ಹೆಚ್ಚಿನ ಲಾಭ ಗಳಿಸಲು ಹಲವು ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ಪಿಷ್ಟ ಹಾಗೂ ಕೆಮಿಕಲ್‌ಗಳನ್ನು ಬಳಸಿ ತಯಾರಿಸಿದ ‘ಅನಲಾಗ್ ಪನ್ನೀರ್’ ಅನ್ನು ಗ್ರಾಹಕರಿಗೆ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹೀಗಾಗಿ ಕೃತಕ ಪನ್ನೀರ್ ನಿಷೇಧ ಮಾಡಲಾಗಿದೆ.ರಾಜ್ಯದಲ್ಲಿ ಕೃತಕ ಪನ್ನೀರ್ ನಿಷೇಧ- ಸಚಿವ ಯುಟಿ ಖಾದರ್ paneer

ಈ ಕುರಿತು ಮಂಗಳೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ಯು.ಟಿ ಖಾದರ್, ಕರ್ನಾಟಕದಲ್ಲಿ ಕೃತಕ ಪನೀರ್ ನಿಷೇಧ ಮಾಡಿದ್ದೇವೆ. ಹೊರ ರಾಜ್ಯಗಳಿಂದ ಕೃತಕ ಪನ್ನೀರ್ ಬರುವ ಸಾಧ್ಯತೆ ಇದೆ. ಪನ್ನೀರ್ ಮಾತ್ರವಲ್ಲ ಕೃತಕವಾಗಿ ತಯಾರಿಸುವ ಎಲ್ಲವೂ ಬ್ಯಾನ್ ಮಾಡುತ್ತೇವೆ ಎಂದಿದ್ದಾರೆ.ರಾಜ್ಯದಲ್ಲಿ ಕೃತಕ ಪನ್ನೀರ್ ನಿಷೇಧ jk02_new jk02 new

Key words: Artificial paneer, banned, Minister, UT Khader