Tuesday, October 13, 2026

Dasara Wishes

Happy Dasara
Home Front Page ಲೋಕಸಭೆಗೆ ಅಪರಿಚಿತರು ನುಗ್ಗಿದ ಪ್ರಕರಣ: ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿ ನಗರ ಕಾಂಗ್ರೆಸ್...

ಲೋಕಸಭೆಗೆ ಅಪರಿಚಿತರು ನುಗ್ಗಿದ ಪ್ರಕರಣ: ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿ ನಗರ ಕಾಂಗ್ರೆಸ್ ಸಮಿತಿ ಪ್ರತಿಭಟನೆ.

ಮೈಸೂರು,ಡಿಸೆಂಬರ್,13,2023(www.justkannada.in): ಲೋಕಸಭೆ ಕಲಾಪದ ವೇಳೆಯೇ ಇಬ್ಬರು ಅಪರಿಚಿತರ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಬಳಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಕಚೇರಿ ಬಳಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ಯಕರ್ತರು ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆದಿದ್ದು, ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸದನದೊಳಗೆ ನುಗ್ಗಿದ ಯುವಕರನ್ನು ಸಾಗರ್ ಹಾಗೂ ಮನೋರಂಜನ್ ಎಂದು ಗುರುತಿಸಲಾಗಿದ್ದು, ಮನೋರಂಜನ್ ಮೈಸೂರು ಮೂಲದವನು ಎನ್ನಲಾಗಿದೆ. ಇಬ್ಬರಲ್ಲಿ ಒಬ್ಬರು ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಆಪ್ತ ಕಾರ್ಯದರ್ಶಿಯಿಂದ ಪಾಸ್ ಪಡೆದುಕೊಂಡು ಸಂಸತ್ತಿನೊಳಗೆ ಬಂದಿದ್ದರು ಎನ್ನಲಾಗಿದೆ.
Key words: Lok Sabha- case -protest -near -MP Pratap Simha- office – Mysore.