Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರಗೆ  ಭರ್ಜರಿ ಗೆಲುವು.

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರಗೆ  ಭರ್ಜರಿ ಗೆಲುವು.

ಸಿಂದಗಿ,ನವೆಂಬರ್,2,2021(www.justkannada.in):  ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದು ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ರಮೇಶ್ ಭೂಸನೂರ ಅವರು 28 462 ಮತಗಳ ಅಂತರದಿಂದ  ಮುನ್ನಡೆ ಸಾಧಿಸಿದ್ದು ಈ ಮೂಲಕ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರಗೆ 80020 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೊಳಿಗೆ 52637 ಮತಗಳು ಲಭಿಸಿವೆ.  ಜೆಡಿಎಸ್ ಅಭ್ಯರ್ಥಿಗೆ 466 ಮತಗಳು ಬಿದ್ದಿವೆ.

ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ, ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆ ಜೋರಾಗಿದೆ. ಇನ್ನು ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

Key words: BJP candidate- Ramesh Bhusanura –won- Sindagi constituency