ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ.

ಹುಬ್ಬಳ್ಳಿ,ಡಿಸೆಂಬರ್,5,2021(www.justkannada.in):  ಸಿಎಂ ಬದಲಾವಣೆ ಕುರಿತು ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೇಳಿಕೆಯನ್ನ ತಳ್ಳಿ ಹಾಕಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೀಘ್ರದಲ್ಲೇ ಮುರುಗೇಶ್​ ನಿರಾಣಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಈಶ್ವರಪ್ಪನವರು ಹೇಳಿಲ್ಲ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. 2023ರವರೆಗೂ ಬಸವರಾಜ ಬೊಮ್ಮಾಯಿಯವರೇ ಸಿಎಂ ಆಗಿರುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ,  ಗುತ್ತಿಗೆದಾರರ ಆರೋಪಕ್ಕೆ ಸಾಕ್ಷಿ ಇಲ್ಲ. ಸಾಕ್ಷಿ ಇದ್ದರೇ ಎಸಿಬಿ ಲೋಕಾಯುಕ್ತಕ್ಕೆ ನೀಡಲಿ.  ಮೋದಿ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ. ಪ್ರಧಾನಿ ಮೋದಿ ಭ್ರಷ್ಟಾಚಾರ ಸಹಿಸಲ್ಲ ಎಂದರು.

Key words: no question – CM- change-Union Minister- Prahlad Joshi -clarified