Sunday, August 23, 2026

BDA Apartments

Home Front Page ಸಿಟಿ ರವಿ ಹೇಳಿಕೆ ಖಂಡಿಸಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ: ಪೊಲೀಸರ ವಶಕ್ಕೆ.

ಸಿಟಿ ರವಿ ಹೇಳಿಕೆ ಖಂಡಿಸಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ: ಪೊಲೀಸರ ವಶಕ್ಕೆ.

ಚಿಕ್ಕಮಗಳೂರು,ಡಿಸೆಂಬರ್,3,2022(www.justkannada.in): ಸಿದ್ರಾಮುಲ್ಲಾಖಾನ್  ಎಂದು ಟೀಕಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಸಿಟಿ ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರಿನ ಬಸವಹಳ್ಳಿಯಲ್ಲಿ ಶಾಸಕ ಸಿ.ಟಿ ರವಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ರಸ್ತೆ ಮಧ್ಯೆದಲ್ಲಿ ಪೊಲೀಸರು ತಡೆದಿದ್ದಾರೆ. ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು ಹೈಡ್ರಾಮಾವೇ ನಡೆಯಿತು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರತಿಭಟನೆ ಮೂಲಕ ಸಿಟಿ ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

Key words: Condemning – statement -CT Ravi- Congress Activitist-protest