ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ಮಂಡ್ಯ,ನವೆಂಬರ್,2,2021(www.justkannada.in):  ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮಧ್ಯೆ ತಮ್ಮ ತವರು ಕ್ಷೇತ್ರ ಹಾನಗಲ್ ನಲ್ಲಿ ಬಿಜೆಪಿ ಸೋಲಲು ಕಾರಣವೇನೆಂಬುದನ್ನ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್ ಎಸ್ ನಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹಾನಗಲ್ ನಲ್ಲಿ ನಿರೀಕ್ಷಿಸಿದಷ್ಟು ಮತಗಳು ಬರಲಿಲ್ಲ. ಹೀಗಾಗಿ ಬಿಜೆಪಿಗೆ ಹಿನ್ನಡೆಯಾಗಿದೆ.  ಸಿಎಂ ಉದಾಸಿಗೆ  ಸಲ್ಲಬೇಕಾದ ಮತ ಪಡೆಯಲು ಆಗಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ  ಎರಡ್ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಹೀಗಾಗಿ ಮತದಾರರು ಕಾಂಗ್ರೆಸ್ ಕೈ ಹಿಡಿದಿದ್ದಾರೆ ಎಂದರು.

ಉಪಚುನಾವಣೆಯಲ್ಲಿ ಕೆಲಸ ಮಾಡಿದ ಕಾರ್ಯಕರ್ತರು ನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ. ಈ ಬೈ ಎಲೆಕ್ಷನ್ ಫಲಿತಾಂಶವನ್ನ ಗಂಭೀರವಾಗಿ ಪರಿಗಣಿಸುತ್ತೇವೆ. ಮುಂದೆ ಎಲ್ಲಾ ತಪ್ಪುಗಳನ್ನ ಸರಿಪಡಿಸಿಕೊಳ್ಳುತ್ತೇವೆ. ಮುಂದಿನ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: CM -Basavaraja Bommai- BJP- lose- Honegal