ಛತ್ತೀಸ್ ಗಢದಲ್ಲಿ1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯ: ಖರೀದಿ ಕುರಿತು ಇಂದು ಸಭೆ –ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂನ್ 17,2023(wwww.justkannada.in):   ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿಯಾಗಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆ ಬೇರೆ ರಾಜ್ಯಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮೊರೆ ಹೋಗಿದ್ದು ಈಗಾಗಲೇ ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ ಎಂದಿದೆ. ಇನ್ನೊಂದು ರಾಜ್ಯ  ಛತ್ತೀಸ್ ಗಢದಲ್ಲಿ 1.50 ಲಕ್ಷ ಮೆ.ಟನ್ ಅಕ್ಕಿ ಲಭ್ಯವಿದೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ಧರಾಮಯ್ಯ , ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು  ಎಂದು ತಿಳಿಸಿದರು.

ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ  ಖುದ್ದಾಗಿ ಮಾತನಾಡಿದ್ದು, ಅಲ್ಲಿ  ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

Key words: 1.50 lakh- metric ton rice-Chhattisgarh– CM Siddaramaiah