ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ ವಶಕ್ಕೆ…

ದಕ್ಷಿಣ ಕನ್ನಡ,ಮೇ,17,2019(www.justkannada.in):  ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ ನಗದನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಂದರು ಬಳಿ ಹಣವನ್ನ ಜಪ್ತಿ ಮಾಡಲಾಗಿದೆ. ಮಂಜುನಾಥ್ ಎಂಬುವವರು ಕೆಎಸ್ ಆರ್ ಟಿ ಸಿ ಬಸ್ ನಲ್ಲಿ 1 ಕೋಟಿ ರೂ ಹಣವನ್ನ ಸಾಗಿಸುತ್ತಿದ್ದರು. ಈ ವಿಚಾರ ತಿಳಿದು ಮಂಗಳೂರು ಉತ್ತರ ಪೊಲೀಸರು  ಹಣವನ್ನ ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Key words: 1 crore- cash -police -detained – KSRTC -bus