ಲಿಂಗಸೂರು ಪತ್ರಕರ್ತನಿಗೆ ಒಂದು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ ಸಿಎಂ.

ಬೆಂಗಳೂರು,ಮಾರ್ಚ್,8,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕು ಹಟ್ಟಿಯ ವಿಜಯ ಕರ್ನಾಟಕ ಪತ್ರಿಕೆಯ ಸೋಮಣ್ಣ ಗುರಿಕಾರ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಪತ್ರಕರ್ತ ಸೋಮಣ್ಣ ಗುರಿಕಾರ ಅವರು ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಎರಡೂವರೆ ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು. ಅವರು ಸಂಕಷ್ಟದಲ್ಲಿರುವ ಬಗ್ಗೆ ರಾಯಚೂರು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ಸಂಘದ ಗಮನಕ್ಕೆ ತಂದಿತ್ತು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಮಂಜೂರು ಮಾಡಿದ್ದಾರೆ.

ಪರಿಹಾರ ಮಂಜೂರು ಮಾಡಲು ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಕೃತಜ್ಞತೆ ಸಲ್ಲಿಸಿದೆ.

Key words: 1 lakh –granted- journalist