ವಿಧಾನಸೌಧದಲ್ಲಿ ಅನಧೀಕೃತ 10.5 ಲಕ್ಷ ರೂ. ಹಣ ಪತ್ತೆ: ಸಹಾಯಕ ಇಂಜಿನಿಯರ್ ವಶಕ್ಕೆ.

ಬೆಂಗಳೂರು,ಜನವರಿ,5,2023(www.justkannada.in): ವಿಧಾನಸೌಧದಲ್ಲಿ ಅನಧೀಕೃತವಾಗಿ 10.5 ಲಕ್ಷ ರೂ. ಹಣ ಪತ್ತೆಯಾಗಿದ್ದು, ಹಣ ಹೊಂದಿದ್ದ ಸಹಾಯಕ ಇಂಜಿನಿಯರ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಧಾ‍ನಸೌಧಕ್ಕೆ  10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ ಮಂಡ್ಯ ಮೂಲದ ಸಹಾಯಕ ಇಂಜಿನಿಯರ್ ಜಗದೀಶ್ ಸಿಕ್ಕಿಬಿದ್ದಿದ್ದಾರೆ. ಬುಧವಾರ ಸಂಜೆ 7 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಜಗದೀಶ್​​ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದರು.

ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಜಗದೀಶ್ ಬ್ಯಾಗ್‌ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ. ಆದರೆ ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಈ ವ್ಯಕ್ತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ಕೂಡಾ ದಾಖಲಾಗಿದೆ.

Key words: 10.5 lakhs –money-find-vidhana soudha-Assistant Engineer.