Tuesday, October 27, 2026

Dasara Wishes

Happy Dasara
Home Front Page ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರು ಅಮಾನತು.

ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರು ಅಮಾನತು.

ಬೆಂಗಳೂರು,ಜುಲೈ,19,2023(www.justkannada.in0):  ವಿಧಾನಸಭೆ ಕಲಾಪದಲ್ಲಿ ಅತಿರೇಕದ ವರ್ತನೆ, ಅಗೌರವ ತೋರಿದ ಆರೋಪದ ಮೇಲೆ  ಹತ್ತು ಮಂದಿ ಬಿಜೆಪಿ ಶಾಸಕರನ್ನು  ಅಮಾನತು  ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ.

ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವ ವರೆಗೂ ಶಾಸಕರನ್ನು ಅಮಾನತು ಮಾಡಲಾಗಿದೆ. ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್​, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅಮಾನತಾಗಿರುವ ಬಿಜೆಪಿ ಶಾಸಕರು.

ಗುರುವಾರ ಮತ್ತು ಶುಕ್ರವಾರ 2 ದಿನಗಳ ಕಾಲ ಅಧಿವೇಶನ ಬಾಕಿ ಉಳಿದಿದೆ. ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಅಮಾನತು ಮಾಡಲಾಗಿದೆ ಎಂದು ಖಾದರ್ ತಿಳಿಸಿದ್ದಾರೆ. ನಂತರ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿಕೆ ಮಾಡಲಾಗಿದೆ.ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರು ಅಮಾನತು bjpmla

ಅಮಾನತುಗೊಂಡವರನ್ನು ಸದನದಿಂದ ಹೊರಕಳಿಸಲು ಮಾರ್ಷಲ್ಸ್‌ ಒಳಬಂದರು. ಅಮಾನತುಗೊಂಡ ಶಾಸಕರನ್ನು ಮಾರ್ಷಲ್​​ ಗಳು ಬಲವಂತವಾಗಿ ಹೊರಗೆ ಕಳುಹಿಸದಂತೆ ತಡೆಯಲು ಬಿಜೆಪಿಯ ಇತರ ಶಾಸಕರು ಪ್ರಯತ್ನಿಸಿದರು. ಆದಾಗ್ಯೂ, ಶಾಸಕರನ್ನು ಬಲವಂತದಿಂದ ಹೊರದಬ್ಬುವಲ್ಲಿ ಮಾರ್ಷಲ್​ ಗಳು ಯಶಸ್ವಿಯಾದರು.

Key words: 10 BJP- MLAs -suspended – showing-disrespect –session