10 ಲಕ್ಷ ಉದ್ಯೋಗ ಸೃಷ್ಠಿ, 3 ಲಕ್ಷದವರೆಗೆ ರೈತರ ಸಾಲಮನ್ನಾ- ಗುಜರಾತ್ ನಲ್ಲಿ ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ.

ಅಹಮದಾಬಾದ್,ನವೆಂಬರ್,12,2022(www.justkannada.in):  ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ದು,  10 ಲಕ್ಷ ಉದ್ಯೋಗ ಸೃಷ್ಠಿ, 3 ಲಕ್ಷದವರೆಗೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದೆ.

ವಿಧಾನಸಭಾ ಚುನಾವಣೆಗೆ  ಕಾಂಗ್ರೆಸ್ ಪ್ರಣಾಳಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಿಡುಗಡೆ ಮಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸರ್ಕಾರ ರಚಿಸಿದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಚುನಾವಣಾ ಪ್ರಣಾಳಿಕೆಯನ್ನು ಅಧಿಕೃತ ದಾಖಲೆಯಾಗಿ ಸ್ವೀಕರಿಸುತ್ತದೆ ಎಂದು ಅಶೋಕ್ ಗೆಹ್ಲೋಟ್ ಹೇಳಿದರು.

ರಾಜ್ಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತೇವೆ. ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿಯನ್ನು ನೀಡುತ್ತೇವೆ.  ಹಾಗೂ ರಾಜ್ಯದ ಪ್ರತಿಯೊಬ್ಬ ಮಹಿಳೆ, ವಿಧವೆ ಮತ್ತು ವೃದ್ಧ ಮಹಿಳೆಗೆ ತಿಂಗಳಿಗೆ 2,000 ರೂ. ನೀಡಲಾಗುತ್ತದೆ. 3,000 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲಾಗುವುದು  ಹಾಗೂ ರಾಜ್ಯದ ಹೆಣ್ಣುಮಕ್ಕಳಿಗೆ ಅವರ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಹಾಗೆಯೇ  ರೈತರ 3 ಲಕ್ಷ ರೂ.ದವರೆಗಿನ ಕೃಷಿ ಸಾಲ ಮನ್ನಾ, 300 ಯೂನಿಟ್ ಉಚಿತ ವಿದ್ಯುತ್, ಪ್ರತಿ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ ನೀಡುವುದಾಗಿ ಘೋಷಿಸಿದೆ.

Key words: 10 lakh- job- creation- Gujarat-election- Manifesto -released – Congress