ವಿಧಾನಸೌಧದಲ್ಲಿ 10 ಲಕ್ಷ ಹಣ ಪತ್ತೆ ವಿಚಾರ: ಬಿಜೆಪಿಯಲ್ಲಿ ಭ‍್ರಷ್ಟಾಚಾರ ನಡೆಯುತ್ತಿರುವುದಕ್ಕೆ ಇದೇ ಸಾಕ್ಷಿ- ಸಿದ್ಧರಾಮಯ್ಯ.

ಮಂಗಳೂರು,ಜನವರಿ,5,2023(www.justkannada.in): ವಿಧಾನಸೌಧದಲ್ಲಿ  ಅನಧಿಕೃತವಾಗಿ 10 ಲಕ್ಷ ರೂ. ಹಣ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಭ‍್ರಷ್ಟಾಚಾರ ನಡೆಯುತ್ತಿರುವುದಕ್ಕೆ ಇದೇ ಸಾಕ್ಷಿಎಂದು ವಿಪಕ್ಷ ನಾಯಕ  ಸಿದ್ಧರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ ಈ ಸರ್ಕಾರದಲ್ಲಿ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ನಡೆಯುತ್ತಿಲ್ಲ. ಈ ರೀತಿ ಸಾಕಷ್ಟು ಪ್ರಕರಣ ನಡೆದಿದೆ. ರಾಜ್ಯದಲ್ಲಿರುವುದು 40% ಸರ್ಕಾರವೆಂದು ಗುತ್ತಿಗೆದಾರರ ಸಂಘ ಹೇಳಿದೆ ಎಂದು ವಾಗ್ದಾಳಿ ನಡೆಸಿದರು.

ಕೆ.ಎಸ್.ಈಶ್ವರಪ್ಪಗೆ ಲಂಚ ಕೊಡಲಾಗದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದರು. ಸಂತೋಷ್ ನನ್ನ ಸಾವಿಗೆ ಈಶ್ವರಪ್ಪ ಕಾರಣವೆಂದು ಡೆತ್​ನೋಟ್​ ಬರೆದಿಟ್ಟಿದ್ದರು. ತುಮಕೂರು ಜಿಲ್ಲೆ ದೇವರಾಯನದುರ್ಗದ ಐಬಿಯಲ್ಲಿ ಗುತ್ತಿಗೆದಾರ ಪ್ರಸಾದ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುತ್ತಿಗೆದಾರ ಶಿವಕುಮಾರ್​​ ಎಂಬುವರು ದಯಾಮರಣ ಕೇಳಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ನಡೆಯುತ್ತಿಲ್ಲ ಎಂದು ಕಿಡಿಕಾರಿದರು.

Key words: 10 lakh- money -found – Vidhana Soudha-proof – corruption – BJP – Siddaramaiah.