Thursday, August 20, 2026

BDA Apartments

Home Front Page ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ; ಕಾಂಗ್ರೆಸ್ ಶಾಸಕ ಭವಿಷ್ಯ.

ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ; ಕಾಂಗ್ರೆಸ್ ಶಾಸಕ ಭವಿಷ್ಯ.

ಬೆಳಗಾವಿ,ನವೆಂಬರ್,21,2023(www.justkannada.in): ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್​ ಶಾಸಕ ವಿಶ್ವಾಸ್ ವೈದ್ಯ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್​ ಶಾಸಕ ವಿಶ್ವಾಸ್ ವೈದ್ಯ, ಸತೀಶ್ ಜಾರಕಿಹೊಳಿ​​ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಸತೀಶ್​ ಜಾರಕಿಹೊಳಿಯನ್ನು ಸಿಎಂ ಆಗಿ ನೋಡಬೇಕೆಂದು ಹೇಳುತ್ತಿದ್ದಾರೆ. ಮುಂದಿನ ದಿನದಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬ ಸಿಎಂ ಆಗುತ್ತಾರೆ ಎಂದಿದ್ದಾರೆ.

ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ ಎಂದು ಶಾಸಕ ವಿಶ್ವಾಸ್ ವೈದ್ಯ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Key words: 100 percent -true – Minister- Sathish Jarakiholi – become CM- Congress MLA