Thursday, September 10, 2026

BDA Apartments

Home Front Page ಮಹಾಮಾರಿ ಡೆಂಗ್ಯೂಗೆ 11 ವರ್ಷದ ಬಾಲಕ ಬಲಿ

ಮಹಾಮಾರಿ ಡೆಂಗ್ಯೂಗೆ 11 ವರ್ಷದ ಬಾಲಕ ಬಲಿ

ಬೆಂಗಳೂರು, ಜುಲೈ, 6,2024 (www.justkannada.in):  ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.

ಅಂಜನಾಪುರದ 11 ವರ್ಷದ ಬಾಲಕ ಗಗನ್ ಡೆಂಗ್ಯೂಗೆ ಬಲಿಯಾದ ಬಾಲಕ.  ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗಗನ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಡೆಂಗ್ಯೂವಿನಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಹಾಸನ ಜಿಲ್ಲೆಯಲ್ಲಿ ಡೆಂಘೀ ಮಹಾಮಾರಿಗೆ ಒಂದೇ ವಾರದೊಳಗೆ ನಾಲ್ಕು ಮಕ್ಕಳು ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲೇ ಮೂವರು ಮಕ್ಕಳು ಮೃತಪಟ್ಟಿದ್ದಾರೆ.

Key words: 11-year, old boy,  dies, dengue