ಮೈತ್ರಿ ಸರ್ಕಾರದ ವಿರುದ್ದ ಅಸಮಾಧಾನಗೊಂಡು ರಾಜೀನಾಮೆಗೆ ಮುಂದಾದ್ರಾ 13 ಮಂದಿ ಅತೃಪ್ತ ಶಾಸಕರು …?

ಬೆಂಗಳೂರು,ಜು,6,2019(www.justkannada.in):  ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡಿರುವ 13 ಅತೃಪ್ತ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಕಂಡು ಬಂದಿದೆ ಎಂದು ಮಾಧ್ಯಮಗಳಿಂದ ತಿಳಿದು ಬಂದಿದೆ.

ಸಚಿವ ಸ್ಥಾನ ಕೈತಪ್ಪಿದಾಗಿನಿಂದಲೂ ಅಸಮಾಧಾನಗೊಂಡಿರುವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಶಾಸಕರಾದ ಶಿವರಾಂ ಹೆಬ್ಬಾರ್, ಶಾಸಕರಾದ ರಾಮಲಿಂಗರೆಡ್ಡಿ, ರೋಷನ್ ಬೇಗ್, ಬಿ.ಸಿ ಪಾಟೀಲ್ , ಮಹೇಶ್ ಕುಮುಟಳ್ಳಿ, ನಾಗೇಂದ್ರ  ಜೆಡಿಎಸ್ ಹುಣಸೂರು ಶಾಸಕರಾದ ಹೆಚ್.ವಿಶ್ವನಾಥ್, ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸೇರಿ 13 ಮಂದಿ ರಾಜೀನಾಮೆ ಸಾಧ್ಯತೆ ಇದೆ ಎಂದು ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಈಗಾಗಲೇ ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೆ 13 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಈ ಎಲ್ಲಾ ಬಂಡಾಯ ಶಾಸಕರು ಸ್ಪೀಕರ್ ಭೇಟಿಗೆ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ.

Keywords: 13 dissatisfied- MLAs – resign- Possibility