Tuesday, August 25, 2026

BDA Apartments

Home Front Page ಮಾಜಿ ಸಚಿವ ಬಿ.ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ

ಮಾಜಿ ಸಚಿವ ಬಿ.ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು,ಜುಲೈ, 22,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗಂದ್ರಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನ  ಜಾರಿ ನಿರ್ದೇಶನಾಲಯ ಬಂಧಿಸಿ ವಿಚಾರಣೆ ನಡೆಸಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಬಿ.ನಾಗೇಂದ್ರ ಅವರನ್ನ ಹಾಜರುಪಡಿಸಲಾಗಿತ್ತು.

ಇಡಿ ಅಧಿಕಾರಿಗಳು  ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3ರವರೆಗೆ ಅಂದರೇ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ  ಕೋರ್ಟ್ ಆದೇಶಿಸಿದೆ.

Key words: 14 days,  judicial custody, former minister, B. Nagendra