Saturday, August 8, 2026

BDA Apartments

Home Crime ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ

ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ

ಲಖನೌ,ಜೂನ್,22,2026 (www.justkannada.in):  ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನಲ್ಲಿ ಭೀಕರ ಅಗ್ನಿದುರಂತ ಸಂಭವಿಸಿದ 14 ಮಂದಿ  ಸಜೀವದಹನವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಷಾ ಮೆಹ್ತಾ ಮಾರ್ಗದಲ್ಲಿರುವ ಈ ವಾಣಿಜ್ಯ ಕಟ್ಟಡದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು14 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ.  ಬೆಂಕಿ ಕಾಣಿಸಿಕೊಂಡ ಪರಿಣಾಮ, ದಟ್ಟ ಹೊಗೆ ಆವರಿಸಿಕೊಂಡಿತ್ತು.

ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ದುರಂತ ಸಂಭವಿಸಿದೆ ಎನ್ನಲಾಗಿದೆ.

ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Key words: Massive, fire disaster, 14 people, burnt, alive