ಸನ್ನಡತೆ ಆಧಾರದಲ್ಲಿ 141 ಕೈದಿಗಳಿಗೆ ಬಿಡುಗಡೆ ಭಾಗ್ಯ…

ಬೆಂಗಳೂರು,ಅ,21,2019(www.justkannada.in): ರಾಜ್ಯದ ಬೇರೆ ಬೇರೆ ಕಾರಾಗೃಹಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 141 ಕೈದಿಗಳಿಗೆ ಇಂದು ಸನ್ನಡತೆ ಆಧಾರದ ಮೇಲೆ ಬಿಡುಗಡೆಯ ಭಾಗ್ಯ ಸಿಕ್ಕಿದೆ.

ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ, ಮೈಸೂರು, ಬೆಳಗಾವಿ, ಚಿಕ್ಕಮಂಗಳೂರು, ಶಿವಮೊಗ್ಗ ಬಳ್ಳಾರಿ, ಸೇರಿದಂತೆ 141 ಕೈದಿಗಳನ್ನ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಬಿಡುಗಡೆಯಾದ ಕೈದಿಗಳೆಲ್ಲರೂ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿಗಳು ಎನ್ನಲಾಗಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಕೈದಿಗಳನ್ನ ಬಿಡುಗಡೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.

Key words: 141 prisoners- release-from-jail-bangalore