ಸೇತುವೆ ಮೇಲಿಂದ ಬಸ್ ಬಿದ್ದು 15 ಮಂದಿ ದುರ್ಮರಣ.

0
2

ಮಧ್ಯಪ್ರದೇಶ,ಮೇ,9,2023(www.justkannada.in): ಸೇತುವೆ ಮೇಲಿಂದ ಬಸ್ ಬಿದ್ದು 15 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.  ಇಂದೋರ್‌ ಗೆ ತೆರಳುತ್ತಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್‌ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಸುಮಾರು 70-80 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ 50 ಅಡಿ ಸೇತುವೆಯಿಂದ ಬಿದ್ದು ಈ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಶಿವರಾಜ್ ಸಿಂಗ್ ಸಾಂತ್ವನ ಹೇಳಿದ್ದು  ಮೃತರ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ ಹಾಗೂ ಗಾಯಾಳುಗಳ ಚಿಕತ್ಸೆಗೆ ತಲಾ 50 ಸಾವಿರ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

Key words: 15 people- died – bus -fell – bridge.