ಮಾರ್ಚ್ 31ರೊಳಗೆ 15 ಸಾವಿರ ಹುದ್ದೆ ಭರ್ತಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆಪ್ಟೆಂಬರ್ 18, 2022 (www.justkannada.in): ಖಾಲಿ ಇರುವ 15 ಸಾವಿರ ಹುದ್ದೆಗಳನ್ನು ಮುಂದಿನ ವರ್ಷದ ಮಾರ್ಚ್ 31 ರೊಳಗೆ ಭರ್ತಿ ಮಾಡಲಾಗುವುದು ಎಂದು  ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್‍ನೊಳಗೆ ಭರ್ತಿ ಮಾಡುವುದಾಗಿ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 2,100 ಶಾಲಾ ಕೊಠಡಿಗಳು ಮತ್ತು 2,500 ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಈ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ದೀರ್ಘಕಾಲೀನ ಯೋಜನೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.