Tuesday, September 15, 2026

BDA Apartments

ಶೀಘ್ರವೇ 15,000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಭರ್ತಿ: ಗೃಹ ಸಚಿವ ಜಿ.ಪರಮೇಶ್ವರ್ B...
Home Front Page ಶೀಘ್ರವೇ 15,000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಭರ್ತಿ: ಗೃಹ ಸಚಿವ ಜಿ.ಪರಮೇಶ್ವರ್

ಶೀಘ್ರವೇ 15,000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಭರ್ತಿ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು, ಜೂನ್ 04, 2023 (www.justkannada.in): ಶೀಘ್ರವೇ 15,000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು, 7 ನೇ ವೇತನ ಆಯೋಗ ಜಾರಿಗೆ ಮಾಡಿದಲ್ಲಿ ಪ್ರತ್ಯೇಕವಾಗಿ ಔರಾದ್ಕರ್ ವರದಿ ಜಾರಿ ಮಾಡುವ ಅಗತ್ಯ ಇಲ್ಲ ಎಂದರು.

ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಇದರಿಂದ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.