ಕಬಿನಿ ಜಲಾಶಯದಿಂದ ನದಿಗೆ ಮತ್ತು ನಾಲೆಗಳಿಗೆ ನೀರು ಬಿಡುಗಡೆ…

ಮೈಸೂರು,ಆ,14,2020(www.justkannada.in):  ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಮೈಸೂರು ಜಿಲ್ಲೆ ಹೆಚ್. ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಲು  ಒಂದು ಅಡಿ ಮಾತ್ರ ಬಾಕಿ ಇದೆ.jk-logo-justkannada-logo

ಕಬಿನಿ ಜಲಾಶಯಕ್ಕೆ 16,112  ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಒಟ್ಟು 15,625 ಕ್ಯೂಸೆಕ್ ನೀರನ್ನ ಹೊರಕ್ಕೆ ಬಿಡಲಾಗುತ್ತಿದೆ. ನಾಲೆಗಳಿಗೆ 625 ಕ್ಯೂಸೆಕ್, ನದಿಗೆ 15,000 ಕ್ಯೂಸೆಕ್ ನೀರನ್ನ ಬಿಡುಗಡೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿ ಆಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 2283.02 ಅಡಿ ಇದೆ.15,625 cusec – water- released - Kabini reservoir.

ಒಟ್ಟು 19.52 ಟಿ. ಎಂ. ಸಿ. ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಇಂದು 18.87 ಟಿ. ಎಂ.ಸಿ ನೀರು ಸಂಗ್ರಹವಾಗಿದೆ. ಕೇರಳಾದ ವೈನಾಡು ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಕಬಿನಿ ಜಲಾಶಯಕ್ಕೆನೀರು ಹರಿದು ಬಂದಿದ್ದು ಕಪಿಲಾ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು.

Key words: 15,625 cusec – water- released – Kabini reservoir.