ಸಿಎಂ ಕಾರ್ಯದರ್ಶಿ ಪೊನ್ನುರಾಜ್ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿ 17 ಐಎಎಸ್ ಅಧಿಕಾರಿಗಳ ವರ್ಗಾವಣೆ.

ಬೆಂಗಳೂರು,ಮೇ,5,2022(www.justkannada.in): ಸಿಎಂ ಕಾರ್ಯದರ್ಶಿ ಪೊನ್ನುರಾಜ್ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿ 17 ಐಎಎಸ್ ಅಧಿಕಾರಿಗಳನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.

ಮೂಲ ಸೌಕರ್ಯ ಅಭಿವೃದ್ದಿ ಇಲಾಖೆ ಗೌರವ್ ಗುಪ್ತ ಅವರನ್ನ ವರ್ಗಾವಣೆ ಮಾಡಲಾಗಿದೆ. ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಬಿಬಿಎಂಪಿಯ ಮುಖ್ಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.covid-dead-body-cancels-license-order-state-government

ಸಿಎಂ ಕಾರ್ಯದರ್ಶಿ ವಿ ಪೊನ್ನುರಾಜ್ ಅವರನ್ನು  ಕೆಪಿಸಿಎಲ್ ನ ಎಂಡಿಯಾಗಿ ನೇಮಕ ಮಾಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ಟಿ.ಕೆ ಅನಿಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

Key words: 17 IAS Officers- Transfers – Government -order