ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರು ಸಾವು.

ಮಿಜೋರಾಂ,ಆಗಸ್ಟ್,23,2023(www.justkannada.in): ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿರುವ ಘಟನೆ ಮಿಜೋರಾಂನಲ್ಲಿ ನಡೆದಿದೆ.

ಇಂದು ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್‌ನಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ.  ಘಟನೆಯಲ್ಲಿ 17 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಐಜ್ವಾಲ್ನಿಂದ ಸುಮಾರು 21 ಕಿ.ಮೀ ದೂರದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಾಗ 35-40 ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ. ಇಲ್ಲಿಯವರೆಗೆ ಹದಿನೇಳು ಶವಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ,  ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ, ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರಿಗೂ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Key words: 17 workers-death- railway flyover – construction- collapsed.