ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನ ದಸರಾ ರಜೆ ಘೋಷಣೆ

ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು ಈ ಮಧ್ಯೆ ನಾಳೆಯಿಂದ 18 ದಿನಗಳ ಕಾಲ ಸರ್ಕಾರಿ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಾಳೆಯಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಇನ್ನು ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಮತ್ತು ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Key words: 18-day, Dasara holiday, declared, government schools, tomorrow