Friday, August 14, 2026

BDA Apartments

Home Crime ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ: 18 ಮಂದಿ ಸಾವು

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ: 18 ಮಂದಿ ಸಾವು

ಪಶ್ಚಿಮ ಬಂಗಾಳ, ನವೆಂಬರ್ 2021 (www.justkannada.in): ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ.

ಟ್ರಕ್‌ಗೆ ಮ್ಯಾಟಡೋರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿಯನ್ನ ಪೊಲೀಸರು ನೀಡಿದ್ದಾರೆ.

ನಾಡಿಯಾದ ಹಂಸಖಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ಬರಿ ಎಂಬಲ್ಲಿ ರಸ್ತೆ ಬದಿಯಲ್ಲಿ ಕಲ್ಲು ತುಂಬಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಇದರ ಭೀಕರತೆಗೆ 18 ಮಂದಿ ಜೀವ ಕಳೆದುಕೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಶಕ್ತಿನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.