195 ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ: ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ –ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 14,2023(www.justkannada.in): ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಬರದ ಬಗ್ಗೆ ಎಲ್ಲಾ ರೀತಿಯ ಸರ್ವೆ ಮಾಡಿಸಿ ವರದಿ ಪಡೆದಿದ್ದೇವೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರಕ್ಕೆ ನಾವು ಬರೆದಿರುವ ಪತ್ರಕ್ಕೆ ಉತ್ತರ ಕೊಟ್ಟಿಲ್ಲ ಎಂದರು.

Key words: 195 taluks- declared- drought-affected– CM Siddaramaiah