ಅ.25 ರಿಂದ ರಾಜ್ಯದಲ್ಲಿ 1ರಿಂದ 5ನೇ ತರಗತಿ ಆರಂಭಕ್ಕೆ ಸರ್ಕಾರ ತೀರ್ಮಾನ..

ಬೆಂಗಳೂರು,ಅಕ್ಟೋಬರ್,18,2021(www.justkannada.in): ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಈಗಾಗಲೇ 6 ರಿಂದ ಮೇಲ್ಪಟ್ಟ ತರಗತಿಗಳು ಆರಂಭವಾಗಿದ್ದು, ದಸರಾ ಬಳಿಕ  1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದರು. ಇದೀಗ ಅ.25 ರಿಂದ ರಾಜ್ಯದಲ್ಲಿ 1ರಿಂದ 5ನೇ ತರಗತಿ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ.

ಪ್ರಾಥಮಿಕ ಶಾಲೆ ಆರಂಭಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಮ್ಮತಿ ನೀಡಿದ್ದು, ಶಾಲೆ ಆರಂಭಕ್ಕೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.  ಮಕ್ಕಳನ್ನ ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯವಾಗಿದೆ. ಶಾಲೆಗೆ ಮಕ್ಕಳ ಹಾಜರಿ ಕಡ್ಡಾಯವಲ್ಲ. ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕಾಗಿದೆ.

Key words: 1st to 5th standard –open- state – Government