Thursday, August 20, 2026

BDA Apartments

Home Front Page 2 ಕೋಟಿ ಉದ್ಯೋಗ ಕೊಡ್ತೀವಿ ಅಂದ್ರು ಕೊಟ್ರಾ..?  ಗ್ಯಾರಂಟಿಗಳ ಬಗ್ಗೆ ಬಿಜೆಪಿ ಟೀಕೆಗೆ ಕಿಮ್ಮನೆ ರತ್ನಾಕರ್...

2 ಕೋಟಿ ಉದ್ಯೋಗ ಕೊಡ್ತೀವಿ ಅಂದ್ರು ಕೊಟ್ರಾ..?  ಗ್ಯಾರಂಟಿಗಳ ಬಗ್ಗೆ ಬಿಜೆಪಿ ಟೀಕೆಗೆ ಕಿಮ್ಮನೆ ರತ್ನಾಕರ್ ಟಾಂಗ್.

ಶಿವಮೊಗ್ಗ,ಜೂನ್,28,2023(www.justkannada.in):  ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಬಿಜೆಪಿ ನಾಯಕರಿಗೆ ಟಾಂಗ್ ನೀಡಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಬಿಜೆಪಿಯವರು 2 ಕೋಟಿ ಉದ್ಯೋಗ ಕೊಡ್ತೀವಿ ಅಂದ್ರು ಕೊಟ್ರಾ…?  ಬಿಜೆಪಿಯವರು 5 ಗ್ಯಾರಂಟಿಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಹಂತ ಹಂತವಾಗಿ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡ್ತಿದೆ. ಗ್ಯಾರಂಟಿಗಳ ಬಗ್ಗೆ ಬಿಜೆಪಿಯವರು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ. ಇವರ ತಲೆಯಲ್ಲಿ ಸಗಣಿ ಇದೆಯೋ ಏನೋ ನನಗೆ ಅರ್ಥ ಆಗ್ತಿಲ್ಲ ಎಂದು ಕಿಡಿಕಾರಿದರು.ra

ಜನವರಿವರೆಗೆ ಬಿಜೆಪಿಯವರು ಗ್ಯಾರಂಟಿ ಬಗ್ಗೆ ಮಾತನಾಡಬಾರದು. ಬಿಜೆಪಿ ಹಗರಣ ಬಗ್ಗೆ ತನಿಖೆ ಮಾಡಲು ನಾನು ಒತ್ತಾಯ ಮಾಡ್ತೇನೆ. ಬಿಜೆಪಿ ಹಗರಣದ  ದುಡ್ಡಲ್ಲೇ ನಾನು ತೀರ್ಥಹಳ್ಳಿಯಲ್ಲಿ ಸೋತಿದ್ದೇನೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ 70 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಹರಿಹಾಯ್ದರು.

Key words: 2 crore- jobs-bjp- Kimmane Ratnakar –Tong